
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 34,281 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 468 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ 23,306 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 23,06,655 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 49,953 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 17,24,438 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5,58,890 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 11,772 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 218 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 3.23.281 ಸಕ್ರಿಯ ಪ್ರಕರಣಗಳು ಇವೆ.
ಬಳ್ಳಾರಿಯಲ್ಲಿ 23, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 13, ಧಾರವಾಡ 10, ಹಾವೇರಿ 11, ಕಲಬುರ್ಗಿ 18, ಕೊಪ್ಪಳ 14 ಮೈಸೂರು 14, ಶಿವಮೊಗ್ಗ 19, ತುಮಕೂರು 19, ಉತ್ತರಕನ್ನಡ 14 ಜನ ಸೇರಿದಂತೆ ರಾಜ್ಯದಲ್ಲಿ ಇಂದು 468 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

