
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮತ್ತೆ ಏರಿಕೆಯಾಗಿದ್ದು, ಒಂದೇ ದಿನ 18,324 ಜನರಿಗೆ ಸೋಂಕು ತಗುಲಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಇವತ್ತು 514 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 26,53,446 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,531 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 24,036 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 23,36,096 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,86,798 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇಂದು 3533 ಜನರಿಗೆ ಸೋಂಕು ತಗಲಿದ್ದು, 347 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ನಿನ್ನೆ 16,387 ಜನರಿಗೆ ಕೊರೊನಾ ಸೋಂಕು ತಗಲಿದ್ದು, 463 ಮಂದಿ ಮೃತಪಟ್ಟಿದ್ದರು, ಇಂದು ನಿನ್ನೆಗಿಂತ ಸೋಂಕಿತರು, ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಮತ್ತೆ ಏರಿಕೆ ಹಾದಿ ಹಿಡಿದಿದೆ.

