alex Certify BIG NEWS: ರಾಜ್ಯದಲ್ಲಿಂದು 44819 ಜನ ಗುಣಮುಖ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 44819 ಜನ ಗುಣಮುಖ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಜನರಿಗೆ ಸೋಂಕು ತಗುಲಿದ್ದು, 60 ಮಂದಿ ಸಾವನ್ನಪ್ಪಿದ್ದಾರೆ. 44.819 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 38,60,774 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,197 ಸೋಂಕಿತರು ಸಾವನ್ನಪ್ಪಿದ್ದಾರೆ. 36,72,744 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 1,48,800 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 11.31 ರಷ್ಟು ಇದೆ.

ಬೆಂಗಳೂರಿನಲ್ಲಿ 6640 ಜನರಿಗೆ ಸೋಂಕು ತಗುಲಿದ್ದು, 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 27,570 ಜನ ಗುಣಮುಖರಾಗಿದ್ದಾರೆ. 71,525 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 1508, ಧಾರವಾಡ 535, ಕೊಡಗು 478, ಮೈಸೂರು 706, ಶಿವಮೊಗ್ಗ 701, ತುಮಕೂರು 572, ಉತ್ತರಕನ್ನಡ 567 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಬೆಂಗಳೂರು ನಗರ 14, ದಕ್ಷಿಣಕನ್ನಡ 5, ಮಂಡ್ಯ 5, ಮೈಸೂರು 5, ಬೆಳಗಾವಿ 3, ಚಿಕ್ಕಬಳ್ಳಾಪುರ 3 ಸೇರಿ ರಾಜ್ಯದಲ್ಲಿ 60 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...