alex Certify ರಾಜ್ಯದಲ್ಲಿಂದು 247 ಜನರಿಗೆ ಸೋಂಕು, ಒಬ್ಬರು ಸಾವು: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 247 ಜನರಿಗೆ ಸೋಂಕು, ಒಬ್ಬರು ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 247 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 278 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.31 ರಷ್ಟು ಇದೆ. ರಾಜ್ಯದಲ್ಲಿ 7064 ಸಕ್ರಿಯ ಪ್ರಕರಣಗಳು ಇವೆ.

ಒಟ್ಟು ಸೋಂಕಿತರ ಸಂಖ್ಯೆ 29,93,599 ಕ್ಕೆ ಏರಿಕೆಯಾಗಿದೆ. ಇದುವರೆಗೆ 38.175 ಜನ ಸೋಂಕಿತರು ಮೃತಪಟ್ಟಿದ್ದಾರೆ. 29.48.331 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 180 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5798 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 134, ದಕ್ಷಿಣ ಕನ್ನಡ 10, ಮೈಸೂರು 48, ತುಮಕೂರು 10 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಒಂದು ಹೊರತುಪಡಿಸಿ ಇಂದು ರಾಜ್ಯದಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...