ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಆರಂಭವಾಗಿದೆ.
ಗುಬ್ಬಿ ಮೂಲದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಕೋವಿಡ್ ಪತ್ತೆಯಾಗಿದೆ.
ಮಧುಮೇಹ, ಬಿಪಿ, ಜ್ವರ, ಕೆಮ್ಮು, ಶೀತ ರೋಗ ಲಕ್ಷಣಗಳು ಇದ್ದಲ್ಲಿ ಕೂಡಲೇ ತಪಾಸಣೆಗೆ ಒಳಗಾಗುವಂತೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ಅಬ್ಬರ ಹೆಚ್ಚಾಗಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲೆಯಲ್ಲಿ 1227 ಮಂದಿ ಸಾವನ್ನಪ್ಪಿದ್ದರು.
ಇದೀಗ ಗುಬ್ಬಿ ಮೂಲದ ವ್ಯಕ್ತಿಗೆ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಕೋವಿಡ್ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.