
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. 24 ಗಂಟೆಯಲ್ಲಿ 7 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,708ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 26,976 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,513 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,33,365 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 13,96,169 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,94,27,16,543 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,07,716 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.