alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; 24 ಗಂಟೆಯಲ್ಲಿ 7 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; 24 ಗಂಟೆಯಲ್ಲಿ 7 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 3,714 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. 24 ಗಂಟೆಯಲ್ಲಿ 7 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,708ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 26,976 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,513 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,33,365 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 13,96,169 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,94,27,16,543 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,07,716 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

— ANI (@ANI) June 7, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...