alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 975 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 4 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,747 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,366 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 796 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,07,834 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 6,89,724 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,38,31,723 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...