ಬೆಂಗಳೂರು: ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ ಬಿಎಫ್.7 ಆತಂಕ ಹಿನ್ನೆಲೆಯಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟವಾಗಿರುವ ರುಪ್ಸಾ ಸಂಘಟನೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವಿದ್ಯಾರ್ಥಿಗಳಿಗೆ ನೆಗಡಿ, ಕೆಮ್ಮು, ಜ್ವರ ಕಂಡು ಬಂದರೆ ರಜೆ ನೀಡಬೇಕು. ನೆಗಡಿ, ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಪೋಷಕರಿಗೆ ಶಾಲಾ ಶಿಕ್ಷಕರು ಸಿಬ್ಬಂದಿ ತಕ್ಷಣ ಮಾಹಿತಿ ಕೊಡಬೇಕು.
ಶಾಲೆ ಆವರಣದಲ್ಲಿ ದಿನ ಬಿಟ್ಟು ದಿನ ಸ್ಯಾನಿಟೈಸ್ ಮಾಡಿಸಬೇಕು. ಶಾಲೆ ಆವರಣದಲ್ಲಿ ಮಕ್ಕಳು ಗುಂಪುಗೂಡುವುದನ್ನು ತಡೆಯಬೇಕು ಎಂದು ಹೇಳಲಾಗಿದೆ.