ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ 5.30 ಗಂಟೆಯವರೆಗೆ 15 ರಿಂದ 18 ವರ್ಷದೊಳಗಿನ 3,80,133 ಮಕ್ಕಳಿಗೆ ಕೊರೋನಾ ಲಸಿಕೆ ಹಾಕಲಾಗಿದೆ.
ಅಂದ ಹಾಗೆ, ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ರಾಜ್ಯದಲ್ಲಿ ಮೊದಲ ದಿನವೇ ಇಷ್ಟೊಂದು ಸಂಖ್ಯೆಯ ಮಕ್ಕಳಿಗೆ ಲಸಿಕೆ ನೀಡಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮೂಡಲಪಾಳ್ಯದ ಬಿಬಿಎಂಪಿ ಪ್ರೌಢಶಾಲೆಯಲ್ಲಿ ಚಾಲನೆ ನೀಡಿದರು. SSLC, PUCಯ ಪ್ರಮುಖ ಘಟ್ಟಗಳಲ್ಲಿ ವ್ಯಾಸಂಗ ಮಾಡುವ 15-18 ವಯೋಮಾನದ ಮಕ್ಕಳಿಗೆ ಲಸಿಕೆ ನೀಡುವುದರಿಂದ ಅವರ ವಿದ್ಯಾಭ್ಯಾಸ ನಿರಾತಂಕವಾಗಿ ಮುಂದುವರೆಯಲು ಅನುಕೂಲವಾಗಲಿದೆ. ಸಂಜೆಯವರೆಗೆ ಸುಮಾರು 4 ಲಕ್ಷ(3,80,133) ಮಕ್ಕಳಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಲಾಗಿದೆ.