ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ಎರಡು ವಾರಗಳ ಕಾಲ ಪ್ರತಿಭಟನೆ ಮಾಡುವಂತಿಲ್ಲ. ಸತ್ಯಾಗ್ರಹ, ಚಳವಳಿ ಮಾಡುವಂತಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು, ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ. ಕೋವಿಡ್ ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿರಬೇಕು. ನಾಳೆಯಿಂದ ಮಾಸ್ಕ್ ಧರಿಸದಿದ್ದರೆ ದಂಡ ಹಾಕಲಾಗುವುದು. ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ ಮಾಡುವಂತಿಲ್ಲ ಎಂದು ಹೇಳಲಾಗಿದೆ.