ಬೆಂಗಳೂರು: ಕೊರೋನಾ ಸಿಟಿ ಸ್ಕ್ಯಾನ್ ಮಾಡಿಸುವವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಹೆಚ್.ಆರ್. ಸಿಟಿ ಸ್ಕ್ಯಾನ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಬಿಪಿಎಲ್ ಕಾರ್ಡ್ ಇದ್ದವರಿಗೆ 1500 ರೂ. ದರ ನಿಗದಿ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಇಲ್ಲದವರಿಗೆ 2500 ರೂ. ನಿಗದಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಹೆಚ್ಚುವರಿ ಆಯುಕ್ತ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆನ್ನಲಾಗಿದೆ.
ನಿನ್ನೆಯಷ್ಟೇ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಗೆ ಗರಿಷ್ಠ 1500 ರೂ. ದರ ನಿಗದಿಪಡಿಸಲಾಗಿತ್ತು. ಸಿಟಿ ಸ್ಕ್ಯಾನ್ ಕೆ 1500 ರೂ., ಎದೆಯ ಡಿಜಿಟಲ್ ಅಥವಾ ಸಾಮಾನ್ಯ ಎಕ್ಸ್ ರೇ ಗೆ 250 ರೂಪಾಯಿ ದರ ನಿಗದಿಪಡಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿತ್ತು. 2 -3 ಸಾವಿರ ರೂ. ಇದ್ದ ಸಿಟಿ ಸ್ಕ್ಯಾನ್ ದರ ಈಗಂತೂ 6 -8 ಸಾವಿರ ರೂಪಾಯಿವರೆಗೆ ಏರಿಕೆಯಾಗಿದ್ದರಿಂದ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಆದರೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.