ಬೆಂಗಳೂರು: ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಕೊರೋನಾ ತಡೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ, ಕಾಲೇಜು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಬಂದ್ ಆಗಲಿವೆ. ಕ್ರೀಡಾ ಸಂಕೀರ್ಣ, ಪಾರ್ಕ್, ಸ್ವಿಮ್ಮಿಂಗ್ ಪೂಲ್ ಸೇರಿ ಎಲ್ಲಾ ಬಂದ್ ಆಗಲಿವೆ.