
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಮುಖವಾಗಿದ್ದು, ಇವತ್ತು 24,214 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 476 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 27,405 ಮಂದಿ ಮೃತಪಟ್ಟಿದ್ದಾರೆ. ಇಂದು 31,459 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 20,94,369 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 4,02,203 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ ಇವತ್ತು 5949 ಜನರಿಗೆ ಸೋಂಕು ತಗಲಿದ್ದು, 6643 ಜನ ಬಿಡುಗಡೆಯಾಗಿದ್ದಾರೆ. 2,06,390 ಸಕ್ರಿಯ ಪ್ರಕರಣಗಳಿದ್ದು, 273 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಗಳಲ್ಲಿ ಕೂಡ ಸಾವಿನ ಸಂಖ್ಯೆ ಏರಿಕೆಯಾಗಿದೆ. ಇಂದು ಬಳ್ಳಾರಿ 22, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 13, ಚಿಕ್ಕಬಳ್ಳಾಪುರ 11, ದಾರವಾಡ 15, ಮೈಸೂರು 18, ತುಮಕೂರು 14, ಉತ್ತರಕನ್ನಡ ಜಿಲ್ಲೆಯಲ್ಲಿ 13 ಮಂದಿ ಸೇರಿದಂತೆ ರಾಜ್ಯದಲ್ಲಿ ಇಂದು 476 ಮಂದಿ ಸಾವನ್ನಪ್ಪಿದ್ದಾರೆ.

