alex Certify BIG NEWS: 7 ಜಿಲ್ಲೆಗಳಲ್ಲಿ ಸೊನ್ನೆ, ಅನೇಕ ಜಿಲ್ಲೆಗಳಲ್ಲಿ ಮತ್ತೆ ಏರಿದ ಕೊರೋನಾ; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 7 ಜಿಲ್ಲೆಗಳಲ್ಲಿ ಸೊನ್ನೆ, ಅನೇಕ ಜಿಲ್ಲೆಗಳಲ್ಲಿ ಮತ್ತೆ ಏರಿದ ಕೊರೋನಾ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇಂದು ಹೊಸದಾಗಿ 1116 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 970 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,64,083 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,10,626 ಜನ ಗುಣಮುಖರಾಗಿದ್ದು, 37,537 ಜನ ಸೋಂಕಿತರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ 15,892 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.65 ರಷ್ಟು ಇದೆ. ರಾಜ್ಯದಲ್ಲಿ ಇಂದು 1,70,306 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 462 ಜನರಿಗೆ ಸೋಂಕು ತಗುಲಿದ್ದು, 265 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಮೃತಪಟ್ಟಿದ್ದು, 7328 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿತರ ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 4, ಬೀದರ್ 0, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 5, ಧಾರವಾಡ 4, ಗದಗ 0, ಹಾವೇರಿ 1, ಕಲಬುರಗಿ 1, ಕೊಪ್ಪಳ 1, ರಾಯಚೂರು 0, ರಾಮನಗರ 0, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 462, ಚಿಕ್ಕಮಗಳೂರು 50, ದಕ್ಷಿಣಕನ್ನಡ 102, ಹಾಸನ 81, ಕೊಡಗು 67, ಮೈಸೂರು 76, ತುಮಕೂರು 60, ಉಡುಪಿ 89 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 5, ದಕ್ಷಿಣಕನ್ನಡ 1, ತುಮಕೂರು 1, ಉಡುಪಿ 1 ಸೇರಿ ರಾಜ್ಯದಲ್ಲಿ 8 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...