alex Certify ರಾಜ್ಯದಲ್ಲಿಂದು 335 ಜನರಿಗೆ ಸೋಂಕು ದೃಢ: 286 ಮಂದಿ ಗುಣಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 335 ಜನರಿಗೆ ಸೋಂಕು ದೃಢ: 286 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 335 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,02,127 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 5 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,287 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 286 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,56,691 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7120 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.28 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 225 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 180 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5640 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 225, ದಕ್ಷಿಣಕನ್ನಡ 19, ಕೊಡಗು 25, ಮೈಸೂರು 14 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು, ಚಿತ್ರದುರ್ಗ, ದಕ್ಷಿಣಕನ್ನಡ, ಧಾರವಾಡ, ಮೈಸೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...