alex Certify ಕೊಡಗು 40 ಸೇರಿ ರಾಜ್ಯದಲ್ಲಿಂದು 330 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗು 40 ಸೇರಿ ರಾಜ್ಯದಲ್ಲಿಂದು 330 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 330 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 304 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,00,435 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,261 ಸೋಂಕಿತರು ಮೃತಪಟ್ಟಿದ್ದಾರೆ. 29,54,817 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7328 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.27 ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 205 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 147 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5602 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 205, ದಕ್ಷಿಣಕನ್ನಡ 15, ಕೊಡಗು 40, ಮೈಸೂರು 13, ಶಿವಮೊಗ್ಗ 11 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 3 ಹಾಗೂ ಬೀದರ್ ನಲ್ಲಿ 1 ಸೇರಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...