alex Certify ಬೆಂಗಳೂರು 146 ಸೇರಿ ರಾಜ್ಯದಲ್ಲಿ 222 ಜನರಿಗೆ ಕೊರೋನಾ ಪಾಸಿಟಿವ್: ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು 146 ಸೇರಿ ರಾಜ್ಯದಲ್ಲಿ 222 ಜನರಿಗೆ ಕೊರೋನಾ ಪಾಸಿಟಿವ್: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 222 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 286 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 7074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.25 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 30,02,649 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,290 ಸೋಂಕಿತರು ಮೃತಪಟ್ಟಿದ್ದಾರೆ. 29,57,256 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 146 ಜನರಿಗೆ ಸೋಂಕು ತಗುಲಿದ್ದು, 147 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5658 ಸಕ್ರಿಯ ಪ್ರಕರಣಗಳಿವೆ. ಒಬ್ಬರು ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 146, ಕೊಡಗು 10, ಮೈಸೂರು 10 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಮತ್ತು ಹಾಸನದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...