ಮೈಸೂರು: ಕೊರೊನಾ ಸೋಂಕಿನ ಎರಡನೇ ಅಲೆ ತೀವ್ರ ಆತಂಕವನ್ನುಂಟುಮಾಡಿರುವ ಹೊತ್ತಲ್ಲೇ ರಾಜ್ಯದಲ್ಲಿ ಡೆಂಗೆ, ಚಿಕೂನ್ ಗುನ್ಯಾ, ಮಲೇರಿಯಾ ಸೋಂಕು ಹರಡುವ ಆತಂಕ ಎದುರಾಗಿದೆ.
ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹೊತ್ತಲ್ಲೇ 4 ಡೆಂಗೆ ಪ್ರಕರಣ ವರದಿಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೂಡ ಡೆಂಗೆ ಕಂಡು ಬಂದಿದೆ ಎನ್ನಲಾಗಿದೆ.
ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಾಗ ಅನೇಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದು, ನೆಗೆಟಿವ್ ಬಂದವರು ಚಿಕಿತ್ಸೆ ಪಡೆದುಕೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದರೆ, ಅದು ಡೆಂಗೆ, ಮಲೇರಿಯಾ ರೋಗ ಲಕ್ಷಣವಾಗಿದ್ದು ನಂತರದಲ್ಲಿ ಅಪಾಯಕಾರಿಯಾಗಬಹುದು ಎಂದು ಹೇಳಲಾಗಿದೆ.
ಆರೋಗ್ಯ ಇಲಾಖೆ ಕ್ಷಿಪ್ರ ಕಾರ್ಯಪಡೆ ರಚಿಸಿದ್ದು, ಡೆಂಗೆ, ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಕೋವಿಡ್ ನೆಗೆಟಿವ್ ನಂತರವೂ ರೋಗ ಲಕ್ಷಣಗಳು ಕಂಡುಬಂದಲ್ಲಿ ಅದು ಚಿಕೂನ್ ಗುನ್ಯಾ ಅಥವಾ ಡೆಂಗೆ ಆಗಿರುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೆಚ್ಚಿನ ನಿಗಾ ವಹಿಸಲಾಗಿದೆ ಎನ್ನಲಾಗಿದೆ.