ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22,823 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 401 ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 25,46,821 ಕ್ಕೆ ಏರಿಕೆಯಾಗಿದೆ. ಇದುವರೆಗೆ 27806 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 52,253 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 21,46,621 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,72,373 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ ಇಂದು 192 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 5736 ಜನರಿಗೆ ಸೋಂಕು ತಗುಲಿದೆ. 1,80,697 ಸಕ್ರಿಯ ಪ್ರಕರಣಗಳು ಇವೆ. ಇಂದು 31,237 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.