alex Certify ರಾಜ್ಯದಲ್ಲಿಂದು ಕೊರೋನಾ ಇಳಿಮುಖ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಇಳಿಮುಖ: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮುಖವಾಗಿದ್ದು, 178 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 373 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6867 ಸಕ್ರಿಯ ಪ್ರಕರಣಗಳು ಇವೆ.

ಪಾಸಿಟಿವಿಟಿ ದರ ಶೇಕಡ 0.31 ರಷ್ಟು ಇದೆ. ಇದುವರೆಗೆ 38,177 ಸೋಂಕಿತರು ಮೃತಪಟ್ಟಿದ್ದಾರೆ. 29,48,704 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,93,777 ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 112 ಜನರಿಗೆ ಸೋಂಕು ತಗುಲಿದ್ದು, 300 ಜನ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, 5609 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 112. ದಕ್ಷಿಣಕನ್ನಡ 16. ಮೈಸೂರು 14 ಹೊಸ ಪ್ರಕರಣ ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಭಾರಿ ಇಳಿಮುಖವಾಗಿದೆ. ಬೆಂಗಳೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...