ಬೆಂಗಳೂರು: ರಾಜ್ಯದಲ್ಲಿ ಇಂದು 1236 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,05,901 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 10 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,981 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 1497 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,78,696 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 15,205 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 689 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸಂಖ್ಯೆ 3,80,936 ಕ್ಕೆ ಏರಿಕೆಯಾಗಿದೆ. ಇವತ್ತು 7 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4252 ಜನ ಸಾವನ್ನಪ್ಪಿದ್ದಾರೆ. ಇವತ್ತು ಬೆಂಗಳೂರಿನಲ್ಲಿ 866 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,66,445 ಜನ ಡಿಸ್ಚಾರ್ಜ್ ಆಗಿದ್ದಾರೆ. 10,238 ಸಕ್ರಿಯ ಪ್ರಕರಣಗಳಿವೆ.