alex Certify BREAKING NEWS: ರಾಜ್ಯದಲ್ಲಿಂದು 301 ಜನರಿಗೆ ಸೋಂಕು, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 301 ಜನರಿಗೆ ಸೋಂಕು, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 301 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 359 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,53,067 ಜನ ಗುಣಮುಖರಾಗಿದ್ದಾರೆ.

ಇದುವರೆಗೆ 38,237 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,98,400 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 0.34 ರಷ್ಟು ಇದ್ದು, 7067 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು 162 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 116 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5129 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 162, ಚಿಕ್ಕಮಗಳೂರು 40, ಧಾರವಾಡ 11, ಹಾಸನ 12, ಮೈಸೂರು 16 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 3, ದಕ್ಷಿಣಕನ್ನಡ 2, ಕೊಡಗು 1, ತುಮಕೂರು 1 ಸೇರಿ ರಾಜ್ಯದಲ್ಲಿ 7 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...