alex Certify BIG NEWS: ಮೈಸೂರು 38, ಕೊಡಗು 30 ಸೇರಿ ರಾಜ್ಯದಲ್ಲಿಂದು 399 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು 38, ಕೊಡಗು 30 ಸೇರಿ ರಾಜ್ಯದಲ್ಲಿಂದು 399 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 399 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,99,098 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,249 ಜನ ಸೋಂಕಿತರು ಮೃತಪಟ್ಟಿದ್ದು, 29,53,565 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.34 ರಷ್ಟಿದೆ. 7255 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು 244 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ಇಂದು 100 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5435 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 244, ಚಿಕ್ಕಮಗಳೂರು 14, ದಕ್ಷಿಣಕನ್ನಡ 15, ಧಾರವಾಡ 10, ಕೊಡಗು 30, ಮೈಸೂರು 38, ತುಮಕೂರು 10 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು 3, ಕೊಡಗು, ಕೊಪ್ಪಳ, ತುಮಕೂರಿನಲ್ಲಿ ತಲಾ 1 ಸೇರಿ 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...