alex Certify BREAKING: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 366 ಜನರಿಗೆ ಪಾಸಿಟಿವ್ ವರದಿ ಬಂದಿದೆ. 17 ಜನರು ಮೃತಪಟ್ಟಿದ್ದಾರೆ. 801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,40,795  ಕ್ಕೆ ಏರಿಕೆಯಾಗಿದೆ. ಇದುವರೆಗೆ 39936 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,94,333 ಸೋಂಕಿತರ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6488 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.69 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 224 ಜನರಿಗೆ ಸೋಂಕು ತಗುಲಿದ್ದು, 11 ಜನ ಮೃತಪಟ್ಟಿದ್ದಾರೆ. 326 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3648 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 17, ದಕ್ಷಿಣಕನ್ನಡ 10, ಮೈಸೂರು 17 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಗ್ರಾಮಾಂತರ, ಗದಗ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 11, ಬೀದರ್, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ರಾಯಚೂರು, ಉಡುಪಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...