alex Certify BIG BREAKING: 11 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಸಂಪೂರ್ಣ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 11 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 314 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 339 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,99,785 ಏರಿಕೆಯಾಗಿದೆ. ಇದುವರೆಗೆ 38,255 ಜನ ಮೃತಪಟ್ಟಿದ್ದಾರೆ. 29,54,196 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ. 7305 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 179 ಜನರಿಗೆ ಸೋಂಕು ತಗುಲಿದೆ. ಇಬ್ಬರು ಮೃತಪಟ್ಟಿದ್ದಾರೆ. 204 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5482 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 179, ಚಿಕ್ಕಮಗಳೂರು 19, ದಕ್ಷಿಣಕನ್ನಡ 26, ಕೊಡಗು 26, ಮೈಸೂರು 15 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಇಬ್ಬರು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಯಾವುದೇ ಸೋಂಕಿತರು ಮೃತಪಟ್ಟ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...