alex Certify ರಾಜ್ಯದಲ್ಲಿಂದು ಕೊರೋನಾ ದಿಢೀರ್ ಹೆಚ್ಚಳ: 456 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ದಿಢೀರ್ ಹೆಚ್ಚಳ: 456 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟವಾಗಿದ್ದು, 456 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.41 ರಷ್ಟು ಇದೆ. ರಾಜ್ಯದಲ್ಲಿ 7132 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತರ ಸಂಖ್ಯೆ 29,98,099 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,230 ಸೋಂಕಿತರು ಮೃತಪಟ್ಟಿದ್ದಾರೆ. 29,52,708 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 256 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 214 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5136 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದು ಕೊರೋನಾ ಕೇಸ್ ಪತ್ತೆಯಾಗಿವೆ. ಬೆಂಗಳೂರು ನಗರ 256, ಚಿಕ್ಕಮಗಳೂರು 66, ದಕ್ಷಿಣ ಕನ್ನಡ 13, ಧಾರವಾಡ 20, ಹಾಸನ 12, ಕೊಡಗು 17, ಮೈಸೂರು 10, ಉತ್ತರಕನ್ನಡ 14, ಹೊಸ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 2, ಮೈಸೂರು 1, ತುಮಕೂರು 1, ಉಡುಪಿ 1 ಸೇರಿ ರಾಜ್ಯದಲ್ಲಿ 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...