alex Certify BIG NEWS: ರಾಜ್ಯದಲ್ಲಿಂದು 224 ಜನರಿಗೆ ಸೋಂಕು; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 224 ಜನರಿಗೆ ಸೋಂಕು; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 224 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 379 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6707 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.43 ರಷ್ಟು ಇದೆ.

ಇದುವರೆಗೆ 38,182 ಸೋಂಕಿತರು ಸಾವನ್ನಪ್ಪಿದ್ದಾರೆ. 29,49,083 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,94,001 ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 122 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 300 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5430 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು 122, ದಕ್ಷಿಣಕನ್ನಡ 17, ಮೈಸೂರು 22 ಹಾಗೂ ತುಮಕೂರು ಜಿಲ್ಲೆಯಲ್ಲಿ 12 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಳಗಾವಿ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಕೊಪ್ಪಳ, ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...