alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಮುಖವಾಗಿದೆ. ಹೊಸದಾಗಿ 171 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 255 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.25 ರಷ್ಟು ಇದೆ. 7912 ಸಕ್ರಿಯ ಪ್ರಕರಣಗಳಿವೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,92,021 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,146 ಸೋಂಕಿತರು ಮೃತಪಟ್ಟಿದ್ದಾರೆ. 29.45.934 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 118 ಜನರಿಗೆ ಸೋಂಕು ತಗುಲಿದ್ದು, 144 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6574 ಸಕ್ರಿಯ ಪ್ರಕರಣಗಳಿವೆ. ಇವತ್ತು ಯಾವುದೇ ಸಾವಿನ ಪ್ರಕರಣ ದಾಖಲಾಗಿಲ್ಲ.

ಬಾಗಲಕೋಟೆ, ಬೀದರ್, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು 118, ಮೈಸೂರು 14 ಹೊಸ ಪ್ರಕರಣ ವರದಿಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಒಂದಂಕಿಗೆ ಇಳಿದಿದೆ. ಮೈಸೂರಿನಲ್ಲಿ ಒಬ್ಬರು ಹೊರತುಪಡಿಸಿ ಯಾವುದೇ ಜಿಲ್ಲೆಗಳಲ್ಲಿ ಇಂದು ಕೋವಿಡ್ ಮರಣ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...