ಬೆಂಗಳೂರು: ರಾಜ್ಯದಲ್ಲಿ ಇವತ್ತು 16,604 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 26,04,431 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 411 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 29,090 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇವತ್ತು 44,473 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 22,61,590 ಜನ ಗುಣಮುಖರಾಗಿದ್ದಾರೆ. 3,13,730 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ 3992 ಜನರಿಗೆ ಹೊಸದಾಗಿ ಸೋಂಕು ತಗಲಿದ್ದು, 242 ಸೋಂಕಿತರು ಮೃತಪಟ್ಟಿದ್ದಾರೆ. 1,46,043 ಸಕ್ರಿಯ ಪ್ರಕರಣಗಳಿದ್ದು, ಇವತ್ತು 20,332 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.