
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಇಳಿಮುಖವಾಗಿದೆ. ಇವತ್ತು ಒಂದೇ ದಿನ 52,253 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ.
ರಾಜ್ಯಾದ್ಯಂತ ಇಂದು 1,38,983 ಟೆಸ್ಟ್ ಮಾಡಲಾಗಿದ್ದು, 22,823 ಪ್ರಕರಣಗಳು ಪತ್ತೆಯಾಗಿವೆ. ಪಾಸಿಟಿವಿಟಿ ದರ ಶೇಕಡ 16.4 ರಷ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 5736 ಪ್ರಕರಣ ಪತ್ತೆಯಾಗಿದ್ದು 31,237 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.