alex Certify ಚಿಕಿತ್ಸೆ, ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡದೆ ಕೈಚೆಲ್ಲಿ ಕುಳಿತ ಸರ್ಕಾರದಿಂದ ನಿರ್ದಯಿ ವರ್ತನೆ: HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕಿತ್ಸೆ, ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡದೆ ಕೈಚೆಲ್ಲಿ ಕುಳಿತ ಸರ್ಕಾರದಿಂದ ನಿರ್ದಯಿ ವರ್ತನೆ: HDK ಆಕ್ರೋಶ

ಚಿಕಿತ್ಸೆ ಸಿಗದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವಾಬ್ದಾರಿತನದ ನಿರ್ದಯಿ ವರ್ತನೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಮಹಾಮಾರಿಯಿಂದ ಜೀವತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿರುವ ಡೀಮ್ಡ್ ಅರಣ್ಯಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರ್ಕಾರ ತಕ್ಷಣವೇ ಸಮರೋಪಾದಿಯಲ್ಲಿ ವ್ಯವಸ್ಥೆ ಮಾಡಬೇಕು. ಬೆಂಗಳೂರಿನ ಎಂಟು ದಿಕ್ಕುಗಳಲ್ಲಿಯೂ ಮರಗಳಿಲ್ಲದ ಬೆಂಗಾಡು ಅರಣ್ಯಭೂಮಿ ಇದೆ. ಇಲ್ಲಿ ಪ್ರತಿದಿನ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರ್ಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕಿತರಿಗೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಠ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯತೆ ಮಾಡಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರ್ಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ತಡಮಾಡದೆ ಅಗತ್ಯ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಜನರ ಹಿಡಿಶಾಪ ಸರ್ಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದವರ ಬಂಧು -ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ ಹೃದಯ ಕಿವುಚಿದಂತಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...