ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಸಂಬಂಧ ಸಾಲು ಸಾಲು ಸಭೆ ನಿಗದಿಯಾಗಿವೆ,
ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಆರೋಗ್ಯ ಸಚಿವರು ಸಭೆ ನಡೆಸಲಿದ್ದಾರೆ ಎಂದು ವಿಕಾಸಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಾಳೆ ಕೇಂದ್ರ ಆರೋಗ್ಯ ಇಲಾಖೆಯಿಂದ ಸಭೆ ನಡೆಸಲಾಗುವುದು. ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಏನೆಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂಬ ಬಗ್ಗೆ ಸಿಎಂ ಸಭೆ ನಡೆಸಲಿದ್ದಾರೆ. ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆಯಿಂದ ಸಭೆ ನಿಗದಿಯಾಗಿದೆ.