alex Certify ಆತಂಕ ಮೂಡಿಸಿದ ಕೊರೋನಾ ಎರಡನೆ ಅಲೆ, ಇನ್ನು ಮೂರು ವಾರ ನಿರ್ಣಾಯಕ -ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ ಎಂದು ಕೇಂದ್ರ ಸರ್ಕಾರ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತಂಕ ಮೂಡಿಸಿದ ಕೊರೋನಾ ಎರಡನೆ ಅಲೆ, ಇನ್ನು ಮೂರು ವಾರ ನಿರ್ಣಾಯಕ -ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ ಎಂದು ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆಯ ಅಲೆ ತೀವ್ರ ಆತಂಕವನ್ನುಂಟು ಮಾಡಿದ್ದು, ಮುಂದಿನ ಮೂರು ವಾರ ನಿರ್ಣಾಯಕವಾಗಿವೆ. ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ.ಕೆ.ಪೌಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು, ಮತ್ತು ಪೊಲೀಸ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಕೊರೋನಾಣ ನಿಯಂತ್ರಿಸುವ ಹೋರಾಟದಲ್ಲಿ ಮುಂದಿನ ಮೂರು ವಾರ ಅತ್ಯಂತ ನಿರ್ಣಾಯಕವಾಗಿದ್ದು, ಪರಿಸ್ಥಿತಿಯನ್ನು ಎದುರಿಸಲು ಸರ್ಕಾರಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಗೃಹ ಮಂತ್ರಾಲಯ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಜನವರಿ 1 ರಂದು 20 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದ ಪ್ರದೇಶದಲ್ಲಿ 10 ಪಟ್ಟು ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 11 ದಿನದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 1.31 ಲಕ್ಷದಿಂದ ಒಂದು 2.73 ಲಕ್ಷ ತಲುಪಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...