ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ ಎದುರಾಗಿದೆ. ಆರೋಗ್ಯ ಇಲಾಖೆಯಿಂದ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ.
ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. 72 ಗಂಟೆಯೊಳಗಿನ ನೆಗೆಟಿವ್ RTPCR ವರದಿ ಪಡೆದುಕೊಂಡಿರಬೇಕಿದೆ. ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಹಿಂದೆ ಲಸಿಕೆ ಪಡೆದವರಿಗೆ ವಿನಾಯಿತಿ ನೀಡಲಾಗಿತ್ತು. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲಾಗಿದೆ.
ಕೇರಳದಲ್ಲಿ ಮೂರನೇ ಅಲೆ ಆತಂಕವನ್ನುಂಟು ಮಾಡಿದೆ. ಪ್ರತಿ ದಿನ 20 ಸಾವಿರಕ್ಕಿಂತ ಅಧಿಕ ಹೊಸ ಪ್ರಕರಣ ವರದಿಯಾಗುತ್ತಿದ್ದು, ಇದರ ಪರಿಣಾಮ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲಾಗಿದೆ.