
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಮೈಸೂರು 6, ದಕ್ಷಿಣ ಕನ್ನಡ ಜಿಲ್ಲೆ 2, ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ 1 ಕೇಸ್ ವರದಿಯಾಗಿವೆ. ಇಂದು 33 ಮಂದಿ ಬಿಡುಗಡೆಯಾಗಿದ್ದಾರೆ. 344 ಸಕ್ರಿಯ ಪ್ರಕರಣಗಳು ಇವೆ. 21 ಮಂದಿ ಆಸ್ಪತ್ರೆಯಲ್ಲಿದ್ದಾರೆ. 323 ಮಂದಿ ಹೋಂ ಐಸೊಲೇಷನ್ ನಲ್ಲಿದ್ದಾರೆ.