alex Certify ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..? ನೈಟ್ ಕರ್ಫ್ಯೂ ಜಾರಿಗೆ ಶಿಫಾರಸು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..? ನೈಟ್ ಕರ್ಫ್ಯೂ ಜಾರಿಗೆ ಶಿಫಾರಸು

ಬೆಂಗಳೂರು: ಕೊರೋನಾ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಡಿವಾಣ ಹಾಕಲು ತಾಂತ್ರಿಕ ಸಮಿತಿ ಸಲಹೆ ನೀಡಿದೆ. ಇದರೊಂದಿಗೆ ಮತ್ತೆ ನೈಟ್ ಕರ್ಫ್ಯೂ ಜಾರಿ ಬಗ್ಗೆಯೂ ಚರ್ಚೆ ನಡೆದಿದೆ.

ಡಿಸೆಂಬರ್ 26 ರಿಂದ ಜನವರಿ 1 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಬೇಕು. ಉತ್ಸವ, ಸಮಾರಂಭ, ಕಾರ್ಯಕ್ರಮ ನಿರ್ಬಂಧಿಸಬೇಕು. ಮಾಸ್ಕ್ ಧರಿಸದವರಿಗೆ ಕೆಲವು ಗಂಟೆಗಳ ಕಾಲ ಜೈಲು ಶಿಕ್ಷೆ ನೀಡಬೇಕು. ಅದೇ ರೀತಿ ನಿಯಮ ಉಲ್ಲಂಘಿಸುವವರಿಗೆ ದಂಡದ ಮೊತ್ತ ಹೆಚ್ಚಿಸಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕ ಎದುರಾಗಿದೆ. ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಡಿವಾಣ ಹಾಕಬೇಕಿದೆ ಎಂದು ಹೇಳಲಾಗಿದ್ದು, ಆರೋಗ್ಯ ಸೇವೆ, ಸೌಲಭ್ಯಗಳನ್ನು ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದ ಸಂದರ್ಭದಲ್ಲಿ ಇದ್ದಂತೆ ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ಸಿಎಂ, ಸಚಿವರು, ಹಿರಿಯ ಅಧಿಕಾರಿಗಳು ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...