ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತಡೆಗೆ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ರಾತ್ರಿ 9ಗಂಟೆಗೆ ವಾಣಿಜ್ಯ ಚಟುವಟಿಕೆ ಸ್ತಬ್ಧವಾಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಎಲ್ಲಾ ಕಡೆ ಪೊಲೀಸರು ತಪಾಸಣೆ ನಡೆಸಿದ್ದು ಅನಗತ್ಯವಾಗಿ ತಿರುಗಾಡುವವರಿಗೆ ಲಾಠಿ ರುಚಿ ತೋರಿಸಿದ್ದಾರೆ.
ಕೊರೋನಾ ಸೋಂಕು ಹೆಚ್ಚಾಗಿರುವ ಬೆಂಗಳೂರು, ಕಲಬುರಗಿ, ಮೈಸೂರು, ಉಡುಪಿ, ಮಣಿಪಾಲ್, ಬೀದರ್ ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಮೊದಲ ದಿನದ ಕೊರೋನಾ ಕರ್ಫ್ಯೂ ಮುಕ್ತಾಯವಾಗಿದೆ. ಏಪ್ರಿಲ್ 20 ರವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 10 ನಂತರ ಅನಗತ್ಯವಾಗಿ ತಿರುಗಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ.