ನವದೆಹಲಿ: ದೇಶದ ಕೆಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹರ್ಯಾಣ, ಗುಜರಾತ್ ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಏರಿಕೆಯಾಗ್ತಿದೆ. ಹೀಗಾಗಿ ಮತ್ತೆ ಕಠಿಣ ನಿರ್ಬಂಧ ಜಾರಿಗೆ ತರಲಾಗ್ತಿದೆ. ಮಧ್ಯಪ್ರದೇಶ, ಹರ್ಯಾಣ ಬಳಿಕ ಗುಜರಾತ್ ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.