ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್-19 ಆರಂಭಿಕ ರೋಗ ಲಕ್ಷಣಗಳು ಕಂಡು ಬಂದ ನಂತರ ಅವರು ಪರೀಕ್ಷೆ ಮಾಡಿಸಿಕೊಂಡಿದ್ದು, ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಸೋಂಕು ತಗುಲಿದ ಹಿನ್ನಲೆಯಲ್ಲಿ ಸದಾನಂದಗೌಡ ಅವರು ಪ್ರತ್ಯೇಕ ವಾಸದಲ್ಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಜಾಗರೂಕರಾಗಿರಬೇಕು. ಮಾರ್ಗಸೂಚಿ ಅನುಸರಿಸಿ, ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಎಂದು ಮನವಿ ಮಾಡಿದ್ದಾರೆ.