alex Certify BIG NEWS: ರಾಜ್ಯದಲ್ಲಿ 4553 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 4553 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 4553 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,625 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 2060 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,63,419 ಜನ ಡಿಸ್ಚಾರ್ಜ್ ಆಗಿದ್ದಾರೆ. 39,092 ಸಕ್ರಿಯ ಪ್ರಕರಣಗಳಿವೆ

ರಾಜಧಾನಿ ಬೆಂಗಳೂರಿನಲ್ಲಿ ಇಂದು 2787 ಜನರಿಗೆ ಹೊಸದಾಗಿ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,47,031 ಕ್ಕೆ ಏರಿಕೆಯಾಗಿದ್ದು, ಇಂದು ಬೆಂಗಳೂರಿನಲ್ಲಿ 8 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 4649 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ಬೆಂಗಳೂರಿನಲ್ಲಿ 1225 ಜನ ಬಿಡುಗಡೆಯಾಗಿದ್ದು, ಇದುವರೆಗೆ 4,14,283 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 28,098 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 20, ಬಳ್ಳಾರಿ 93, ಬೆಳಗಾವಿ 52, ಬೆಂಗಳೂರು ನಗರ 2782, ಬೆಂಗಳೂರು ಗ್ರಾಮಾಂತರ 155, ಬೀದರ್ 147, ಚಾಮರಾಜನಗರ 15, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 17, ಚಿತ್ರದುರ್ಗ 29, ದಕ್ಷಿಣಕನ್ನಡ 83, ಧಾರವಾಡ 100, ದಾವಣಗೆರೆ 23, ಹಾವೇರಿ 7, ಹಾಸನ 104, ಗದಗ 18, ಕಲಬುರ್ಗಿ 170, ಕೊಡಗು 14, ಕೋಲಾರ 20, ಕೊಪ್ಪಳ 10, ಮಂಡ್ಯ 79, ಮೈಸೂರು 260, ರಾಯಚೂರು 23, ರಾಮನಗರ 18, ಶಿವಮೊಗ್ಗ 36, ತುಮಕೂರು 107, ಉಡುಪಿ 73, ಉತ್ತರಕನ್ನಡ 49, ವಿಜಯಪುರ 16, ಯಾದಗಿರಿ 18 ಜನರಿಗೆ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...