ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ಒಂದೇ ದಿನ 1587 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 869 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,42,178 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 10 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,425 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 12,067 ಸಕ್ರಿಯ ಪ್ರಕರಣಗಳು ಇದ್ದು 131 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 1037 ಸೋಂಕು ತಗುಲಿದೆ. ಜನರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 8623 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿಂದು 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.