
ಬೆಂಗಳೂರು: ರಾಜ್ಯದಲ್ಲಿ ಇಂದು 1522 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,82,608 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 11,750 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 8,46,082 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24,757 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 719 ಜನರಿಗೆ ಕೊರೋನಾ ಸೋಂಕು ತಗಲಿರುವುದು ಗೊತ್ತಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,68,604 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 7 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 4121 ಮಂದಿ ಸಾವನ್ನಪ್ಪಿದ್ದಾರೆ. 3,46,116 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 18,366 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.