alex Certify BIG BREAKING: ರಾಜ್ಯದಲ್ಲಿಂದೂ ಕೊರೋನಾ ಸ್ಪೋಟ, 4553 ಜನರಿಗೆ ಸೋಂಕು ದೃಢ, 15 ಮಂದಿ ಸಾವು -39092 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದೂ ಕೊರೋನಾ ಸ್ಪೋಟ, 4553 ಜನರಿಗೆ ಸೋಂಕು ದೃಢ, 15 ಮಂದಿ ಸಾವು -39092 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಫೋಟವಾಗಿದ್ದು, 4553 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,625 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 2060 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,63,419 ಜನ ಡಿಸ್ಚಾರ್ಜ್ ಆಗಿದ್ದಾರೆ. 39,092 ಸಕ್ರಿಯ ಪ್ರಕರಣಗಳಿವೆ

ರಾಜಧಾನಿ ಬೆಂಗಳೂರಿನಲ್ಲಿ ಇಂದು 2787 ಜನರಿಗೆ ಹೊಸದಾಗಿ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,47,031 ಕ್ಕೆ ಏರಿಕೆಯಾಗಿದ್ದು, ಇಂದು ಬೆಂಗಳೂರಿನಲ್ಲಿ 8 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 4649 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ಬೆಂಗಳೂರಿನಲ್ಲಿ 1225 ಜನ ಬಿಡುಗಡೆಯಾಗಿದ್ದು, ಇದುವರೆಗೆ 4,14,283 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 28,098 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...