alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 428 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,37,383 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಮೂವರು ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,207 ಕ್ಕೆ ಏರಿಕೆಯಾಗಿದೆ. ಇವತ್ತು 760 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,18,859 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 6298 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 227 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 3,97,836 ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದು, ಇದುವರೆಗೆ 4383 ಜನ ಸಾವನ್ನಪ್ಪಿದ್ದಾರೆ. 4012 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...