

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8778 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 67 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 13,008 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 6079 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,92,003 ಜನ ಗುಣಮುಖರಾಗಿದ್ದಾರೆ. 78,617 ಸಕ್ರಿಯ ಪ್ರಕರಣಗಳಿದ್ದು, 474 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಇಂದು 5500 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಬೆಂಗಳೂರಿನಲ್ಲಿ 55 ಜನ ಸೋಂಕಿತರು ಮೃತಪಟ್ಟಿದ್ದು, 57575 ಸಕ್ರಿಯ ಪ್ರಕರಣಗಳು ಇವೆ.