ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗತೊಡಗಿದೆ. ಇವತ್ತು 830 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,02,240 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 10 ಜನ ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,954 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 2164 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 8,74,202 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,065 ಸಕ್ರಿಯ ಪ್ರಕರಣಗಳಿದ್ದು, 254 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.