alex Certify BIG NEWS: ರಾಜ್ಯದಲ್ಲಿಂದು ಹೊಸದಾಗಿ 899 ಜನರಿಗೆ ಸೋಂಕು ದೃಢ, 4 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಹೊಸದಾಗಿ 899 ಜನರಿಗೆ ಸೋಂಕು ದೃಢ, 4 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 899 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,26,767 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 12,138 ಜನ ಮೃತಪಟ್ಟಿದ್ದಾರೆ. 9,05,158 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 9452 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿಂದು 465 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,92,128 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಂದು ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4346 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 3,81,905 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5876 ಜನ ಚಿಕಿತ್ಸೆ ಪಡೆಯುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...