ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 19,067 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,61,065 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 4603 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 10,14,152 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಒಂದೇ ದಿನ 81 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,351 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಬರೋಬ್ಬರಿ 1,33,543 ಸಕ್ರಿಯ ಪ್ರಕರಣಗಳು ಇವೆ. 620 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸುನಾಮಿ ಎದ್ದಿದೆ. ಒಂದೇ ದಿನ 12,793 ಜನರಿಗೆ ಸೋಂಕು ತಗುಲಿದ್ದು, 60 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 97,897 ಸಕ್ರಿಯ ಪ್ರಕರಣಗಳಿವೆ.