ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 324 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,34,576 ಕ್ಕೆ ಏರಿಕೆಯಾಗಿದೆ.
ಇವತ್ತು 890 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 9,15,382 ಜನ ಗುಣಮುಖರಾಗಿ ಡಿಸ್ಚಾರ್ಜಾ ಆಗಿದ್ದಾರೆ. 6985 ಸಕ್ರಿಯ ಪ್ರಕರಣಗಳಿವೆ. ಇಂದು ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12190 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 165 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.